ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಲಗಾಮಿಗೆ ಒಳಪಟ್ಟಿದೆ. ಜಿಲ್ಲೆಯಲ್ಲಿಂದು ಒಬ್ಬರಲ್ಲಿ ಮಾತ್ರ ಸೋಂಕು ದೃಢಪಟ್ಟಿದೆ. ಈ ಮೂಲಕ ಇದುವರೆಗಿನ ಸೋಂಕಿತರ ಸಂಖ್ಯೆ 60964ಕ್ಕೆ ಏರಿಕೆಯಾಗಿದೆ.
ಇಂದು 4 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 59629ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1312 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Kshetra Samachara
23/10/2021 07:21 pm