ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಆತಂಕ ಇಳಿಕೆ ಮುಖವಾಗುತ್ತಿದ್ದು, ಇಂದು ಯಾವುದೇ ಸೋಂಕು ದೃಢಪಟ್ಟಿಲ್ಲ. ಈವರೆಗೂ ಒಟ್ಟು 60,969 ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಇಂದು ಒಬ್ಬರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 59,635 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 1,314 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 18 ಸಕ್ರಿಯ ಪ್ರಕರಣಗಳಿವೆ.
Kshetra Samachara
29/10/2021 07:05 pm