ಧಾರವಾಡ: ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಸಂಪೂರ್ಣ ಹಿಡಿತದಲ್ಲಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಹೀಗಾಗಿ ಒಟ್ಟು ಸೋಂಕಿತರ ಸಂಖ್ಯೆ ನಿನ್ನೆ ಇದ್ದಂತೆ 60,970 ಇದೆ.
ಇಂದು ಮೂವರು ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 59,642 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,315 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
Kshetra Samachara
01/11/2021 07:06 pm