ಧಾರವಾಡ: ಕಳೆದ ಕೆಲವು ದಿನಗಳಿಂದ ಏರಿಕೆ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಭಾರಿ ಇಳಿಕೆ ಕಂಡಿದೆ. ಇಂದು ಕೇವಲ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಈವರೆಗೂ ಒಟ್ಟು 61,015 ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಸೋಂಕಿನಿಂದ ಇಂದು ಇಬ್ಬರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 59,676 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,318 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 19 ಸಕ್ರಿಯ ಪ್ರಕರಣಗಳಿವೆ.
Kshetra Samachara
18/11/2021 07:33 pm