ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ದೊಡ್ಡ ಸಭಾಭವನಕ್ಕೆ ಕಡಿಮೆ ಜನ ಹೋಗಿದ್ದೇ ಪುಣ್ಯ ಇಲ್ಲವಾದರೆ ಕೊರೊನಾ ಇನ್ನೂ ಭಯಾನಕವಾಗ್ತಿತ್ತು

ಧಾರವಾಡ: ಧಾರವಾಡದಲ್ಲಿರುವ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರ 1200 ಜನ ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ಆದರೆ, ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ವತಿಯಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೇವಲ 200 ಜನರಷ್ಟೇ ಪಾಲ್ಗೊಂಡಿದ್ದರು. ದೊಡ್ಡ ಮಟ್ಟದಲ್ಲಿ ಜನ ಸೇರಿದ್ದರೆ ಇನ್ನೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿತ್ತು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಶವಂತ ಮದೀನಕರ ಹೇಳಿದರು.

ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಕೊರೊನಾ ಸ್ಪೋಟಗೊಂಡಿರುವ ಕುರಿತು ಮಾತನಾಡಿರುವ ಅವರು, ಈಗಾಗಲೇ ನಾವು 286 ಜನರನ್ನು ತಪಾಸಣೆಗೊಳಪಡಿಸಿದ್ದೇವೆ. 66 ಜನರಿಗೆ ಕೊರೊನಾ ದೃಢಪಟ್ಟಿದ್ದು, ಅದರಲ್ಲಿ 7 ಜನ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಕಳೆದ ವಾರ ಕಾಲೇಜಿನ ವತಿಯಿಂದ ಕಲಾಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗಿತ್ತು. ಅಲ್ಲಿ ಸೋಂಕು ಹರಡಿಕೊಂಡಿದೆ ಎಂದರು.

ಈ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳಿಂದ ಯಾರೂ ಬಂದಿರಲಿಲ್ಲ. ಸೆಪ್ಟಂಬರ್ ತಿಂಗಳಲ್ಲೇ ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದು, ಯಾರಾದರೂ ತಮ್ಮ ಪೋಷಕರ ಸಂಪರ್ಕಕ್ಕೆ ಹೋಗಿದ್ದರೇ ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಹೋದ 400 ಜನ ವಿದ್ಯಾರ್ಥಿಗಳು ಹಾಗೂ ಎಸ್‌ಡಿಎಂ ಕಾಲೇಜಿನ 3 ಸಾವಿರ ಜನ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ 8 ತಂಡಗಳು ಪರೀಕ್ಷಾ ಕಾರ್ಯ ನಡೆಸುತ್ತಿವೆ. ಎರಡು ಹಾಸ್ಟೆಲ್‌ಗಳನ್ನು ಸೀಲ್ಡೌನ್ ಮಾಡಲಾಗಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

25/11/2021 04:45 pm

Cinque Terre

92.49 K

Cinque Terre

14

ಸಂಬಂಧಿತ ಸುದ್ದಿ