ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ ಎಸ್‌ಡಿಎಂ ಮೆಡಿಕಲ್ ನ ಮತ್ತೇ 116 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ : ಸೋಂಕಿತರ ಸಂಖ್ಯೆ 182 ಕ್ಕೆ ಏರಿಕೆ

ಧಾರವಾಡ: ಧಾರವಾಡದಲ್ಲಿ ನಿಧಾನವಾಗಿ ಮತ್ತೆ ಕೋವಿಡ್ ಸೋಂಕು ಹರಡುತ್ತಿದೆ. ಎಸ್‌ಡಿಎಂ ಮೆಡಿಕಲ್ ಕಾಲೇಜಿನ ವತಿಯಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ 66 ಜನ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದೀಗ ಆ ಸಂಖ್ಯೆ 182ಕ್ಕೆ ಏರಿಕೆಯಾಗಿದೆ.

ನಿನ್ನೆ ಹಲವರನ್ನು ತಪಾಸಣೆ ನಡೆಸಿದ್ದು, ಅವರಲ್ಲಿ 116 ಜನರಿಗೆ ಕೋವಿಡ್ ದೃಢಪಟ್ಟಿದ್ದು, ನಿನ್ನೆ ಪತ್ತೆಯಾದ 66 ಜನ ಸೇರಿ ಒಟ್ಟು 182 ಜನರಿಗೆ ಕೋವಿಡ್ ದೃಢಪಟ್ಟಿದೆ.

ಸಂಜೆವರೆಗೆ ಮತ್ತೆ ಎಸ್‌ಡಿಎಂ ಆವರಣದ 690 ಜನರನ್ನು ಆರ್‌ಟಿಪಿಸಿಆರ್ ಹಾಗೂ ಆರ್‌ಎಟಿ ತಪಾಸಣೆಗೆ ಒಳಪಡಿಸಲಾಗಿದೆ. ಕಿಮ್ಸ್, ಡಿಮಾನ್ಸ್‌ ಹಾಗೂ ಎಸ್‌ಡಿಎಂನ ಕೋವಿಡ್ ಪ್ರಯೋಗಾಲಯಗಳಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗಿದೆ. 116 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಮಧ್ಯರಾತ್ರಿಯ ನಂತರ ಈ ವರದಿಗಳು ಲಭ್ಯವಾಗಿವೆ. ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವುದರಿಂದ ಯಾರಲ್ಲಿಯೂ ರೋಗದ ಗಂಭೀರ ಸ್ವರೂಪದ ಲಕ್ಷಣಗಳಿಲ್ಲ

ನ.17 ರಂದು ಎಸ್‌ಡಿಎಂ ಆಸ್ಪತ್ರೆ ಬಳಿಯ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಕೆಲವು ಪಾಲಕರೂ ಕೂಡ ಭಾಗವಹಿಸಿದ್ದರೆಂದು ತಿಳಿದು ಬಂದಿದೆ. ಅಂತಹ ವ್ಯಕ್ತಿಗಳೂ ಕೂಡ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಇದುವರೆಗೆ ಎಸ್‌ಡಿಎಂ ಆವರಣದಿಂದ ಹೊರಗೆ ಎಲ್ಲಿಯೂ ಪ್ರಕರಣಗಳೂ ವರದಿಯಾಗಿಲ್ಲ. ಹುಬ್ಬಳ್ಳಿ, ಧಾರವಾಡ ಅವಳಿನಗರ ಹಾಗೂ ಜಿಲ್ಲೆಯ ಸಾರ್ವಜನಿಕರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸ್ವ್ಯಾಬ್ ನೀಡಿ, ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕೆ ಈ ಮುನ್ನೆಚ್ಚರಿಕೆಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Edited By : Manjunath H D
Kshetra Samachara

Kshetra Samachara

26/11/2021 10:14 am

Cinque Terre

49.82 K

Cinque Terre

4

ಸಂಬಂಧಿತ ಸುದ್ದಿ