ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಸ್‌ಡಿಎಂನಲ್ಲಿ ಕೊರೊನಾ ಸ್ಪೋಟ: ಜನ ಆತಂಕಪಡುವ ಅಗತ್ಯವಿಲ್ಲ

ಧಾರವಾಡ: ಧಾರವಾಡದ ಎಸ್‌ಡಿಎಂನಲ್ಲಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ಸಂಪೂರ್ಣ ಹತೋಟಿಗೆ ಬಂದಿದೆ. ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಆವರಣದ 500 ಮೀಟರ್ ಸುತ್ತಲಿನ ಪ್ರದೇಶವನ್ನು ಕಂಟೈನ್ಮೆಮೆಂಟ್ ವಲಯವೆಂದು ಪರಿಗಣಿಸಿ ಬಿಗಿ ಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಭಾನುವಾರ ಎಸ್‌ಡಿಎಂಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು.

ನ.15 ರಿಂದ 19 ರವರೆಗೆ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು. ಅವರಲ್ಲಿ ಜ್ವರ ,ಕೆಮ್ಮು ಕಂಡು ಬಂದಿದ್ದರಿಂದ ತಪಾಸಣೆಗೊಳಪಡಿಸಿದಾಗ ಕೋವಿಡ್ ದೃಢಪಟ್ಟಿದೆ. ನಂತರ ಉಳಿದರೆಲ್ಲರೂ ಸೇರಿ 3973 ಎಸ್‌ಡಿಎಂ ವೈದ್ಯರು, ವಿದ್ಯಾರ್ಥಿಗಳು, ಸಿಬ್ಬಂದಿಯನ್ನು ತಪಾಸಣೆಗೊಳಪಡಿಸಲಾಗಿದೆ.ಎಲ್ಲರ ವರದಿಗಳು ಬಂದಿದ್ದು 306 ಜನರಲ್ಲಿ ಸೋಂಕು ದೃಢಪಟ್ಟಿದೆ. ಎಸ್‌ಡಿಎಂ ಸುತ್ತಲಿನ 500 ಮೀಟರ್ ವ್ಯಾಪ್ತಿಯ ಜನರನ್ನೂ ಕೂಡ ತಪಾಸಣೆ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳೂ ಕೂಡ ಈ ಬಗ್ಗೆ ನಿಯಂತ್ರಣಕ್ಕೆ ವಿಶೇಷ ಗಮನ ನೀಡಿದ್ದಾರೆ ಎಂದರು.

ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಎಸ್‌ಡಿಎಂನ ಡಾ.ನಿರಂಜನ ಕುಮಾರ್, ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಪೊಲೀಸ್ ಉಪ ಆಯುಕ್ತ ಸಾಹಿಲ್ ಬಾಗ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು‌.

Edited By : Nagesh Gaonkar
Kshetra Samachara

Kshetra Samachara

28/11/2021 03:07 pm

Cinque Terre

44.39 K

Cinque Terre

0

ಸಂಬಂಧಿತ ಸುದ್ದಿ