ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಎಸ್‌ಡಿಎಂ ಓಪಿಡಿ ಬುಧವಾರದವರೆಗೆ ಬಂದ್

ಧಾರವಾಡ: ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಬಿಗಿ ಕ್ರಮಗಳನ್ನು ಮುಂದುವರೆಸಲಾಗಿದ್ದು, ಬುಧವಾರ (ಡಿ.1) ದವರೆಗೆ ಎಸ್‌ಡಿಎಂ ಆಸ್ಪತ್ರೆಯ ಓಪಿಡಿ ಹಾಗೂ ಹೊಸ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಧಾರವಾಡ ಹಾಗೂ ಸುತ್ತಲಿನ ಜಿಲ್ಲೆಗಳಿಂದ ಹುಬ್ಬಳ್ಳಿ ಧಾರವಾಡಕ್ಕೆ ಚಿಕಿತ್ಸೆಗಾಗಿ ಬರುವ ರೋಗಿಗಳು ಇದನ್ನು ಗಮನಿಸಿ ಯೋಜನೆಗಳನ್ನು ಮರು ರೂಪಿಸಿಕೊಳ್ಳಬೇಕು ಅಥವಾ ಹುಬ್ಬಳ್ಳಿಯ ಕಿಮ್ಸ್, ಧಾರವಾಡ ಜಿಲ್ಲಾ ಆಸ್ಪತ್ರೆ ಅಥವಾ ಅವಳಿನಗರದ ಯಾವುದಾದರೂ ಆಸ್ಪತ್ರೆಗಳಿಗೆ ಭೇಟಿ ನೀಡಬಹುದು.

ಕೋವಿಡ್ ವೈರಾಣುವಿನ ಜಿನೋಮ್ ಸಿಕ್ವೆನ್ಸ್ ವರದಿಗಳು ಬುಧವಾರ ಕೈಸೇರುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

28/11/2021 03:16 pm

Cinque Terre

54.11 K

Cinque Terre

6

ಸಂಬಂಧಿತ ಸುದ್ದಿ