ಧಾರವಾಡ: ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೊರೊನಾ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಧಾರವಾಡ ಜಿಲ್ಲಾಡಳಿತ ಎಲ್ಲ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳ ಕೊರೊನಾ ತಪಾಸಣೆಗೆ ಮುಂದಾಗಿದೆ.
ಸೋಮವಾರದಿಂದ ಧಾರವಾಡ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ಧಾರವಾಡದ ಅನೇಕ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸಿದೆ.
ಹಾಸ್ಟೆಲ್‌ಗಳಲ್ಲಿರುವ ಎಲ್ಲ ವಿದ್ಯಾರ್ಥಿಗಳು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲೇಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದ್ದು, ಆರೋಗ್ಯ ಇಲಾಖೆಯು ಕಡ್ಡಾಯವಾಗಿ ತಪಾಸಣೆ ನಡೆಸುತ್ತಿದೆ.
Kshetra Samachara
29/11/2021 07:36 pm