ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು.

ಫಸ್ಟ್ ಡೋಸ್ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ ಮಾಡುತ್ತಿದ್ದೇವೆ. ಎರಡುವರೆ ಲಕ್ಷ ಲಸಿಕೆ ನಮ್ಮ ಬಳಿ ಲಭ್ಯವಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ 4 ಜನರಿಗೆ ಪಾಸಿಟಿವ್ ಬಂದಿದೆ. ಧಾರವಾಡದಲ್ಲಿ ಹೊಸದಾಗಿ ಇಬ್ಬರಿಗೆ ಪಾಸಿಟಿವ್ ಬಂದಿದೆ ಎಂದರು.

ಇನ್ನೂ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯ ಸುತ್ತಲಿನ ಶಾಲಾ ಕಾಲೇಜುಗಳು ಮತ್ತೆ ನಾಳೆಯಿಂದ ಆರಂಭ ಮಾಡುತ್ತೇವೆ. ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳಿಗೆ ನಿರ್ಬಂಧ ಹೇರಲ್ಲ. ನಿರ್ಬಂಧ ಹೇರಲು ಅವಕಾಶ ಇಲ್ಲ.ಧಾರವಾಡ ಜಿಲ್ಲೆಯಲ್ಲಿ ಪ್ರತಿನಿತ್ಯ ಸಾವಿರ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ ಎಂದರು.

Edited By : Manjunath H D
Kshetra Samachara

Kshetra Samachara

01/12/2021 08:52 am

Cinque Terre

45.5 K

Cinque Terre

1

ಸಂಬಂಧಿತ ಸುದ್ದಿ