ಧಾರವಾಡ: ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವ್ಯಾಪಿಸಿದ್ದ ಕೋವಿಡ್ ಸೋಂಕು ಬಹುತೇಕ ನಿಯಂತ್ರಣಕ್ಕೆ ಬಂದಿದೆ. ಜಿನೋಮ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಕಳಿಸಿದ್ದ 113 ಪ್ರಕರಣಗಳಲ್ಲಿ ಯಾವುದೇ ಹೊಸ ಪ್ರಬೇಧದ ವೈರಾಣು ಇಲ್ಲವೆಂಬುದು ಗೊತ್ತಾಗಿದೆ. ಇನ್ನೂ140 ಪ್ರಕರಣಗಳ ಜಿನೋಮ್ ಸಿಕ್ವೆನ್ಸಿಂಗ್ ವರದಿ ಬರಬೇಕಾಗಿದೆ.
ಮುಂಜಾಗ್ರತೆಗಾಗಿ ನಾಳೆ ಡಿ.2 ರಂದು ಕೂಡ ಹೊರ ರೋಗಿಗಳ ವಿಭಾಗದ ಸೇವೆ (ಓಪಿಡಿ) ಹಾಗೂ ಆಸ್ಪತ್ರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಮುಂದುವರೆಸಲಾಗುವುದು.500 ಮೀಟರ್ ಸುತ್ತಮುತ್ತಲಿನ ಪ್ರದೇಶದ ಶಾಲೆ, ಕಾಲೇಜುಗಳ ಪುನರಾರಂಭಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಎಸ್‌ಡಿಎಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪತ್ತೆಯಾದ ಕೋವಿಡ್ ಸೋಂಕು ಹೊರಗೆ ಹರಡದಂತೆ ನಿಯಂತ್ರಣದಲ್ಲಿಡಲಾಗಿತ್ತು. ಜಿನೋಮ್ ಸಿಕ್ವೆನ್ಸಿಂಗ್ ವರದಿಗಳು ಸಂಪೂರ್ಣವಾಗಿ ದೊರೆತ ಬಳಿಕ ತಾಂತ್ರಿಕ ಸಲಹಾ ತಜ್ಞರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.
ಗುರುವಾರವೂ ಕೂಡ ಎಸ್‌ಡಿಎಂನ ಓಪಿಡಿ ಸೇವೆಗಳು ಹಾಗೂ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಿರುವ ನಿರ್ಬಂಧ ಮುಂದುವರೆಯಲಿದೆ. ಆಸ್ಪತ್ರೆಯ 500 ಮೀಟರ್ ಸುತ್ತಮುತ್ತಲಿನ ಶಾಲೆ ಕಾಲೇಜುಗಳನ್ನು ಪುನರಾರಂಭಿಸಲು ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Kshetra Samachara
01/12/2021 09:46 pm