ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರೋಟರಿ ಶಾಲೆಯ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್: ಶಾಲೆಯಲ್ಲಿ ಹೆಚ್ಚಿದ ಆತಂಕ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಹೆಚ್ಚುತ್ತಿರುವ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೇನು ಕೋವಿಡ್ ಸೋಂಕು ಕಡಿಮೆಯಾಯಿತು, ಎನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಶಾಲೆಯ ಆಡಳಿತ ಮಂಡಳಿಯು ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳಿಗೆ ಕೋವಿಡ್ ತಪಾಸಣೆ ನಡೆಸಿತು.

ಹೌದು.. ಸತ್ತೂರಿನ ಎಸ್.ಡಿ.ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಿಂದ ಮತ್ತಷ್ಟು ಆತಂಕ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ.

ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜೆ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಭೀತಿ ಮತ್ತಷ್ಟು ಆವರಿಸಿರುವುದರಿಂದ ಶಾಲೆಯ ಆವರಣದಲ್ಲಿಯೇ ಸಾಮೂಹಿಕ ಸ್ವ್ಯಾಬ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮುಂದಾದರು.

Edited By : Nagesh Gaonkar
Kshetra Samachara

Kshetra Samachara

02/12/2021 03:04 pm

Cinque Terre

26.99 K

Cinque Terre

1

ಸಂಬಂಧಿತ ಸುದ್ದಿ