ಧಾರವಾಡ: ಕೊರೊನಾ ಸೋಂಕಿಗೆ ತುತ್ತಾಗಿ ಸಾವಿಗೀಡಾದ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಶಾಸಕ ಅಮೃತ ದೇಸಾಯಿ ಅವರು ಪರಿಹಾರದ ಚೆಕ್ ಹಸ್ತಾಂತರಿಸಿದರು.
ಧಾರವಾಡದ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಕೋವಿಡ್‌ನಿಂದ ಮೃತಪಟ್ಟ ಧಾರವಾಡ ಗ್ರಾಮೀಣ ಕ್ಷೇತ್ರದ ಕುಟುಂಬಸ್ಥರಿಗೆ ಈ ಪರಿಹಾರದ ಚೆಕ್ ನೀಡಲಾಯಿತು.
ಕೋವಿಡ್ ಸಾಂಕ್ರಾಮಿಕ ರೋಗ, ಅಕಾಲಿಕ ಮಳೆಯಿಂದ ಉಂಟಾದ ಪ್ರವಾಹ ಹೀಗೆ ವಿವಿಧ ರೀತಿಯ ನೈಸರ್ಗಿಕ ವಿಕೋಪಗಳಿಂದ ಜಿಲ್ಲೆಯ ಜನ ಸಂಕಷ್ಟಕ್ಕೀಡಾಗಿದ್ದಾರೆ. ಅವರ ನೆರವಿಗೆ ಸರ್ಕಾರ ಸದಾ ಸಿದ್ಧವಿದ್ದು, ಪರಿಹಾರ ವಿತರಣೆಗೆ ತುರ್ತು ಕ್ರಮ ವಹಿಸಲಾಗಿದೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.
ಶಾಸಕ ಅಮೃತ ದೇಸಾಯಿ ಮಾತನಾಡಿ, ಕೋವಿಡ್ ಅತೀವೃಷ್ಟಿ, ಅಕಾಲಿಕ ಮಳೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಸ್ವಲ್ಪ ಮಟ್ಟಿನ ತಡೆ ಆಗಿತ್ತು. ಆದರೂ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಿದೆ. ಹಾನಿಯಾಗಿದ್ದ ಸುಮಾರು 2.500 ಮನೆಗಳಿಗೆ ಪರಿಹಾರ ದೊರಕಿಸಲು ಕ್ರಮ ವಹಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ವಿವಿಧ ಹಂತದ ಅಧಿಕಾರಿಗಳು ಸಹ ಈ ಸಂದರ್ಭದಲ್ಲಿದ್ದರು.
Kshetra Samachara
21/12/2021 10:37 pm