ಹುಬ್ಬಳ್ಳಿ: ಕೇಂದ್ರ ಸರ್ಕಾರ 15 ರಿಂದ 18 ವರ್ಷದ ಮಕ್ಕಳಿಗೆ ಇಂದಿನಿಂದ ಲಸಿಕಾ ಅಭಿಯಾನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯಿಂದ, ಮಕ್ಕಳಿಗೆ ಮೊದಲ ಡೋಸ್ ನೀಡುವ ಮೂಲಕ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ಅಭಿಯಾನದಲ್ಲಿ ಮೊದಲ ದಿನವೇ ಹುಬ್ಬಳ್ಳಿ- ಧಾರವಾಡ ನಗರದಲ್ಲಿ 20 ಸಾವಿರ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದೆ ಎಂದು ಶೆಟ್ಟರ್ ತಿಳಿಸಿದರು.
Kshetra Samachara
03/01/2022 12:43 pm