ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ 13 ಜನ ವಿದ್ಯಾರ್ಥಿನಿಯರಿಗೆ ಕೊರೊನಾ ದೃಢ: ಹಾಸ್ಟೆಲ್ ಸೀಲ್ಡೌನ್

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಮತ್ತೆ ಹೆಚ್ಚಳವಾಗುತ್ತಿದೆ. ಧಾರವಾಡದ ಡಿಎಆರ್ ಮೈದಾನದ ಬಳಿ ಇರುವ ಮೆಟ್ರಿಕ್ ನಂತರದ ಅಲ್ಪಸಂಖ್ಯಾತರ ಬಾಲಕಿಯರ ವಸತಿ ನಿಲಯದಲ್ಲಿ 13 ಜನ ವಿದ್ಯಾರ್ಥಿನಿಯರಿಗೆ ಕೊರೊನಾ ತಗುಲಿರುವ ಬಗ್ಗೆ ವರದಿಯಾಗಿದೆ.

ಸದ್ಯ ಈ 13 ಜನ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲಾಗಿದ್ದು, ಉಳಿದ ವಿದ್ಯಾರ್ಥಿನಿಯರು ಹಾಸ್ಟೆಲ್ ಬಿಟ್ಟು ಹೋಗದಂತೆ ಇಡೀ ವಸತಿ ನಿಲಯವನ್ನು ಸೀಲ್ಡೌನ್ ಮಾಡಲಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ವಿದ್ಯಾರ್ಥಿನಿಯರ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು. 71 ಜನ ವಿದ್ಯಾರ್ಥಿನಿಯರ ಪೈಕಿ 13 ಜನ ವಿದ್ಯಾರ್ಥಿನಿಯರಲ್ಲಿ ಕೊರೊನಾ ಪತ್ತೆಯಾಗಿದ್ದು, ಅವರ ಸಂಪರ್ಕಕ್ಕೆ ಬಂದ ಉಳಿದ ವಿದ್ಯಾರ್ಥಿನಿಯರನ್ನು ಹಾಸ್ಟೆಲ್‌ನಲ್ಲೇ ಇಟ್ಟು ಇಡೀ ಹಾಸ್ಟೆಲ್‌ನ್ನು ಸೀಲ್ಡೌನ್ ಮಾಡಲಾಗಿದೆ.

Edited By : Manjunath H D
Kshetra Samachara

Kshetra Samachara

10/01/2022 02:24 pm

Cinque Terre

87.08 K

Cinque Terre

13

ಸಂಬಂಧಿತ ಸುದ್ದಿ