ಧಾರವಾಡ: ಧಾರವಾಡ ಜಿಲ್ಲೆಯ ವಿವಿಧ ಶಾಲೆಗಳ 46 ಜನ ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಜೊತೆಗೆ 3 ಜನ ಶಿಕ್ಷಕರಲ್ಲೂ ಸೋಂಕು ಕಾಣಿಸಿಕೊಂಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಾದ್ಯಂತ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಎಸ್ಓಪಿ ಅನುಸಾರ ತರಗತಿ ನಡೆಸಲಾಗುತ್ತಿದೆ. ಸುರಕ್ಷತಾ ಕ್ರಮವಾಗಿ ಕೊರೊನಾ ಧೃಡಪಟ್ಟ ಶಾಲೆಗಳಿಗೆ ರಜೆ ನೀಡಲಾಗಿದ್ದು, ಐದು ದಿನದ ನಂತರ ಶಾಲೆಗೆ ಸ್ಯಾನಿಟೈಸರ್ ಮಾಡುವುದರ ಮೂಲಕ ಪುನಃ ತರಗತಿಗಳನ್ನು ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Kshetra Samachara
11/01/2022 09:40 pm