ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೋಂಕಿತ ಪೊಲೀಸರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ; ಕಮಿಷನರ್ ಲಾಬುರಾಮ

ಹುಬ್ಬಳ್ಳಿ: ಒಮಿಕ್ರಾನ್ ಮತ್ತು ಕೊರೊನಾ ನಿಯಂತ್ರಣಕ್ಕಾಗಿ ಜಾರಿ ಮಾಡಲಾಗಿರುವ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಇಂದು ಹು-ಧಾ ಪೋಲಿಸ್ ಆಯುಕ್ತ ಲಾಬೂರಾಮ್ ಸಿಟಿ ರೌಂಡ್ಸ್ ಹೊಡೆದರು.

ಚನ್ನಮ್ಮ ವೃತ್ತದಲ್ಲಿ ಪೊಲೀಸ್ ಬಿಗಿ ಭದ್ರತೆ ಪರಿಶೀಲನೆ ನಡೆಸಿದ ಅವರು, ಪೊಲೀಸರಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈವರೆಗೆ 150 ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಕೋವಿಡ್ ದೃಢಪಟ್ಟಿದೆ. ಅಂತಹ ಸಿಬ್ಬಂದಿಗಳು ಮನೆಯಲ್ಲಿಯೇ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂತವರಲ್ಲಿ ಯಾರಿಗಾದರೂ ಮನೆಯಲ್ಲಿ ಚಿಕಿತ್ಸೆ ಪಡೆಯಲು ಆಗದೇ ಇದ್ದಲ್ಲಿ, ಅವರಿಗೆ ಶನಿವಾರದಿಂದ ನವನಗರದ ಅಂಬೇಡ್ಕರ್ ಭವನದಲ್ಲಿ 45 ಹಾಸಿಗೆಗಳ ಕೋವಿಡ್ ಸೆಂಟರ್ ಪ್ರಾರಂಭ ಮಾಡಲಾಗಿದೆ ಎಂದರು.

ಈಗಾಗಲೇ ಕೋವಿಡ್ ದೃಢಪಟ್ಟ ಪೊಲೀಸ್ ಸಿಬ್ಬಂದಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದು, ಎಲ್ಲರ ಆರೋಗ್ಯ ಉತ್ತಮವಾಗಿದೆ‌. ಯಾರ ಆರೋಗ್ಯವೂ ಚಿಂತಾಜನಕವಾಗಿಲ್ಲ. ಚೇತರಿಕೆ ಕಾಣುತ್ತಿದ್ದಾರೆ. ಅವರಿಗೆ ಸೂಕ್ತ ಸಲಹೆ ಮತ್ತು ಧೈರ್ಯ ತುಂಬುವ ಕೆಲಸ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ದೃಢಪಟ್ಟ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

Edited By : Shivu K
Kshetra Samachara

Kshetra Samachara

16/01/2022 01:33 pm

Cinque Terre

45.07 K

Cinque Terre

1

ಸಂಬಂಧಿತ ಸುದ್ದಿ