ಧಾರವಾಡ: ಅನಾರೋಗ್ಯದಿಂದಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿರುವ ನಾಡಿನ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರಿಗೆ ಕೊರೊನಾ ದೃಢಪಟ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಪ್ರಕಟಣೆ ನೀಡಿರುವ ಮುಖ್ಯಮಂತ್ರಿಗಳು, ಜ್ವರದಿಂದ ಬಳಲುತ್ತಿರುವ ಡಾ.ಕಣವಿ ಅವರಿಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ನಾಡಿನ ಹೆಸರಾಂತ ಕವಿಗಳಲ್ಲೊಬ್ಬರಾಗಿರುವುದರಿಂದ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.
Kshetra Samachara
20/01/2022 10:37 pm