ಹುಬ್ಬಳ್ಳಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ಶ್ರೀ ಮೃತ್ಯುಂಜಯ ಹೈಸ್ಕೂಲ್ ನಲ್ಲಿ 7 ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರಿಗೆ ಸೋಂಕು ದೃಢಪಟ್ಟಿದ್ದು ಪರಿಣಾಮ, ಹೈಸ್ಕೂಲನ್ನು ಇಂದು ಸೀಲ್‍ಡೌನ್ ಮಾಡಲಾಯಿತು.
ವಿದ್ಯಾರ್ಥಿಗಳಲ್ಲಿ ಹೆಚ್ಚು ಕೊರೊನಾ ಪಾಸಿಟಿವ್ ದೃಢಪಡುತ್ತಿರುವುದು ಭೀತಿ ಹುಟ್ಟಿಸಿದೆ. ಇಲ್ಲಿನ ಹೈಸ್ಕೂಲಿನ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಕಳೆದೆರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅದರ ಒಟ್ಟು ವರದಿ ಬಂದಿದ್ದು 10 ಪಾಸಿಟಿವ್ ದೃಢ ಪಟ್ಟಿದೆ. ಸದ್ಯ ಹೈಸ್ಕೂಲ್ ಸೀಲ್‍ಡೌನ್ ಮಾಡಲಾಗಿದ್ದು, ಒಂದು ವಾರ ರಜೆ ಘೋಷಿಸಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿ, ಗ್ರಾಮೀಣ ಅಭಿವೃದ್ಧಿ ಅಧಿಕಾರಿ, ಶಾಲೆಯ ಮುಖ್ಯೋಪಾಧ್ಯಾಯರು ಭೇಟಿನೀಡಿ ಪರಿಶೀಲಿಸಿದರು.
Kshetra Samachara
21/01/2022 08:31 pm