ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಭಾರಿ ಏರಿಕೆ ಕಂಡಿದೆ. ನಿನ್ನೆ (ಶುಕ್ರವಾರ)ವಷ್ಟೇ 373 ಜನರಿಗೆ ಕೊರೊನಾ ದೃಢಪಟ್ಟಿತ್ತು, ಆದರೆ ಇಂದು ಈ ಸಂಖ್ಯೆ ದ್ವಿಗುಣಗೊಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 790 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೂ ಒಟ್ಟು 68,545 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಇಂದು 661 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 63,643 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಈವರೆಗೂ ಒಟ್ಟು 1,329 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3,571 ಸಕ್ರಿಯ ಪ್ರಕರಣಗಳಿವೆ.
Kshetra Samachara
22/01/2022 09:38 pm