ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆಯ ರೀತಿ ಏರಿಕೆ ಕಾಣುತ್ತಿದೆ. ಶುಕ್ರವಾರ 373 ಜನರಿಗೆ, ಶನಿವಾರ 790 ಜನರಿಗೆ ಸೋಂಕು ಕಾಣಿಸಿಕೊಂಡಿತ್ತು. ಇಂದು ಈ ಸಂಖ್ಯೆ ಸಾವಿರದ ಗಡಿಗೆ ಬಂದು ನಿಂತಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೂ ಒಟ್ಟು 69,500 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಇಂದು 415 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 64,058 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,329 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 4,111 ಸಕ್ರಿಯ ಪ್ರಕರಣಗಳಿವೆ.
Kshetra Samachara
23/01/2022 07:54 pm