ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 32 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೂ ಒಟ್ಟು 83,809 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು 137 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 82,049 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಈವರೆಗೂ ಒಟ್ಟು 1,357 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 401 ಸಕ್ರಿಯ ಪ್ರಕರಣಗಳಿವೆ.
Kshetra Samachara
15/02/2022 07:31 pm