ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಕೇವಲ ಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೂ ಒಟ್ಟು 84,022 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು 15 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 82,601 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1374 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 44 ಸಕ್ರಿಯ ಪ್ರಕರಣಗಳಿವೆ.
Kshetra Samachara
28/02/2022 08:14 pm