ಧಾರವಾಡ: ಜಿಲ್ಲೆಯಲ್ಲಿ ನಿನ್ನೆ (ಬುಧವಾರ) ಕೇವಲ ಒಬ್ಬರಿಗೆ ಮಾತ್ರ ಸೋಂಕು ದೃಢಪಟ್ಟಿತ್ತು. ಆದರೆ ಇಂದು ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 11 ಜನರರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 84,034 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು 7 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 82,620 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 1377 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 34 ಸಕ್ರಿಯ ಪ್ರಕರಣಗಳಿವೆ.
Kshetra Samachara
03/03/2022 08:19 pm