ಧಾರವಾಡ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಕೇಸ್ ಪತ್ತೆಯಾಗಿಲ್ಲ. ಈವರೆಗೂ ಒಟ್ಟು 84,069 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಇಂದು ಒಬ್ಬರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 82,674 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,383 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 5 ಸಕ್ರಿಯ ಪ್ರಕರಣಗಳಿವೆ.
Kshetra Samachara
24/03/2022 08:24 pm