ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಆಗುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು ಒಂದು ಕೊರೊನಾ ಕೇಸ್ ಪತ್ತೆ ಆಗಿದೆ.ಈವರೆಗೂ ಒಟ್ಟು 84082 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಸುಧಾರಿಸಿಕೊಂಡು ಇಂದು ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಈವರೆಗೂ 82,686 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೂ ಒಟ್ಟು 1,384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 05 ಸಕ್ರಿಯ ಪ್ರಕರಣಗಳಿವೆ.
Kshetra Samachara
15/04/2022 07:32 pm