ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಕೊರೋನಾ ವಾರಿಯರ್ಸ್‌

ಹುಬ್ಬಳ್ಳಿ : ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಶುಶ್ರೂಷಕಿಯೊಬ್ಬರು ಗುರುವಾರ ಬೆಳಿಗ್ಗೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಅರೆ ಪ್ರಜ್ಞಾವಸ್ಥೆಯಲ್ಲಿರುವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ಗೊತ್ತಾಗಿಲ್ಲ. ಅವರಿಗೆ ಎಚ್ಚರ ಬಂದ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕೊರೋನಾ ವಾರಿಯರ್ಸ್ ಎಂದು ಗುರುತಿಸಿಕೊಂಡಿರುವ ನರ್ಸ್ ಆತ್ಮಹತ್ಯೆಗೆ ಯತ್ನಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

Edited By :
Kshetra Samachara

Kshetra Samachara

18/09/2020 10:22 am

Cinque Terre

24.98 K

Cinque Terre

0

ಸಂಬಂಧಿತ ಸುದ್ದಿ