ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 264 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 15,453ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 277 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 12,859ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 5 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 453ಕ್ಕೆ ಏರಿಕೆಯಾಗಿದೆ.
Kshetra Samachara
19/09/2020 08:05 pm