ಕುಂದಗೋಳ: ಶಾಸಕಿ ಕುಸುಮಾವತಿ ಶಿವಳ್ಳಿ ಅವರ ವಾಹನ ಚಾಲಕ ಹಾಗೂ ಆಪ್ತ ಸಹಾಯಕನಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರೊಡನೆ ಸಂಪರ್ಕ ಹೊಂದಿದ್ದ ಕುಸುಮಾವತಿ ಅವರು ವೈದ್ಯರ ಸಲಹೆ ಮೇರೆಗೆ ಹತ್ತು ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನನ್ನ ವಾಹನ ಚಾಲಕ ಹಾಗೂ ಆಪ್ತ ಸಹಾಯಕರಿಬ್ಬರಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ಒಳಪಟ್ಟಿರುವೆ. ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
Kshetra Samachara
19/09/2020 06:27 pm