ಹುಬ್ಬಳ್ಳಿ: ಅವರೆಲ್ಲ ಕಿಲ್ಲರ್ ಕೊರೋನಾ ವೈರಸ್ ವಿರುದ್ಧ ಜೀವದ ಹಂಗು ತೊರೆದು ಹೋರಾಟ ನಡೆಸಿದ ಸೇನಾನಿಗಳು. ಈ ಸೇನಾನಿಗಳ ಸಾಧನೆಯನ್ನು ಸರ್ಕಾರ ಗುರುತಿಸಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕೆಲವರ ಅಟ್ಟಹಾಸದಿಂದ ಬಹುದೊಡ್ಡ ಬಹುಮಾನಗಳೇ ಸಿಕ್ಕಿವೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್...
ಹೀಗೆ ಕರ್ತವ್ಯನಿರತ ಸಿಬ್ಬಂದಿಯೊಬ್ಬರ ಕಣ್ಣೀರು ನೋಡಿದರೇ ಎಂತಹವರಿಗೂ ಕರುಳು ಚುರುಕ್ ಎನ್ನುತ್ತೇ. ಹೌದು.. ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ ಮೇಲೆ ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಹಲ್ಲೆ ಮಾಡಿದ್ದಾಳೆ. ಜಿಲ್ಲಾಡಳಿತ 85,000 ವ್ಯಾಕ್ಸಿನ್ ಗುರಿಯನ್ನು ಹೊಂದಿದ್ದು, 416 ತಂಡಗಳನ್ನು ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದೇ ಆದರೆ ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಜೀವಕ್ಕೆ ಮಾತ್ರ ಯಾವುದೇ ಬೆಲೆ ಇಲ್ಲದಂತಾಗಿದೆ. ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದ್ದು, ಮಹಿಳೆಯೊಬ್ಬಳು ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದು, ಸಿಬ್ಬಂದಿ ಗಾಯಗೊಂಡಿದ್ದಾರೆ.
ಇನ್ನೂ ಸ್ಥಳಕ್ಕೆ ಕಸಬಾ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಯಶವಂತ ಮದಿನವರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಸಾರ್ವಜನಿಕ ಸೇವೆಗೆ ನಿಂತಿರುವ ಸಿಬ್ಬಂದಿ ಮೇಲೆ ಸಾರ್ವಜನಿಕರೇ ಹಲ್ಲೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಕೋವಿಡ್ ಸಂದಿಗ್ಧ ಸಮಯದಲ್ಲಿಯೂ ಕೂಡ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿ ಮೇಲೆ ಈ ರೀತಿಯ ದೌರ್ಜನ್ಯ ಸರಿಯಲ್ಲ ಎಂದು ಪ್ರಜ್ಞಾವಂತರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಕಮೀಷನರೇಟ್ ಶಿಸ್ತು ಕ್ರಮಗಳನ್ನು ಜರುಗಿಸಿ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ರಕ್ಷಣೆ ಒದಗಿಸಬೇಕಿದೆ.
Kshetra Samachara
17/09/2021 04:08 pm