ಧಾರವಾಡ: ರೋಗಿಯನ್ನು ವಾರ್ಡ್‌ಗೆ ಶಿಫ್ಟ್ ಮಾಡಲು ಸರ್ಕಾರಿ ಆಸ್ಪತ್ರೆಯಲ್ಲೇ ಲಂಚ ಕೇಳಿದ ಲಂಚಾವತಾರ ಬಯಲಾಗಿದೆ. ರೋಗಿಯನ್ನು ವಾರ್ಡ್‌ಗೆ ಶಿಫ್ಟ್ ಮಾಡಲು ಧಾರವಾಡ ಜಿಲ್ಲಾಸ್ಪತ್ರೆ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ಹಣ ಕೇಳುವಾಗ ರೋಗಿ ಸಂಬಂಧಿ ವಿಡಿಯೋ ಮಾಡಿಕೊಂಡಿದ್ದಾರೆ.
ಧಾರವಾಡ ತಾಲೂಕಿನ ಗರಗ ಮೂಲದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆಗೆ ಹೊಟ್ಟೆ ನೋವು ಹಿನ್ನೆಲೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು. ಬಳಿಕ ವಾರ್ಡ್‌ಗೆ ಶಿಫ್ಟ್ ಮಾಡುವಾಗ ಆಸ್ಪತ್ರೆ ಸಿಬ್ಬಂದಿ ರೋಗಿ ಸಂಬಂಧಿಕರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಮಹಿಳೆಯ ಪುತ್ರನ ಬಳಿ ಆಯಾಗಳಿಗೆ ತಲಾ 200 ರೂಪಾಯಿ, ನರ್ಸ್‌ಗಳಿಗೆ 600 ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ.
ಖಾಸಗಿ ಆಸ್ಪತ್ರೆಗೆ ಹೋದ್ರೆ ಸಾವಿರಾರು ರೂಪಾಯಿ ಖರ್ಚಾಗ್ತಿತ್ತು. ಇಲ್ಲಿ ಉಚಿತವಾಗಿ ಚಿಕಿತ್ಸೆ ಆಗಿದೆ ಅದಕ್ಕಾದರೂ ಹಣ ಕೊಡಿ ಎಂದು ಆಸ್ಪತ್ರೆ ಸಿಬ್ಬಂದಿ ಡಿಮ್ಯಾಂಡ್ ಮಾಡಿದ್ದಾರೆ. ಈ ವೇಳೆ ಹಣ ಕೇಳುವುದನ್ನು ರೋಗಿ ಸಂಬಂಧಿ ವಿಡಿಯೋ ಮಾಡಿದ್ದಾರೆ.
Kshetra Samachara
05/10/2021 09:44 am