ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಇನ್ಮುಂದೆ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ವಾಹನ ಯಾಕೆ? ಈ ಸುದ್ದಿ ಓದಿ!

ಧಾರವಾಡ : ಕೊರೊನಾ ತಪಾಸಣೆ ವ್ಯಾಪಕವಾಗಿ ಹೆಚ್ಚಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸಲು ಸರ್ಕಾರ, ಜಿಲ್ಲಾಡಳಿತ ನಿರಂತರವಾಗಿ ಶ್ರಮಿಸುತ್ತಿದೆ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವಾಗಿ ಈ ಹೋರಾಟ ಮುಂದುವರೆಸಬೇಕು.

ನಗರ ಮತ್ತು ಗ್ರಾಮೀಣ ಭಾಗಗಳ ಜನರನ್ನು ಸ್ವ್ಯಾಬ್ ಸಂಗ್ರಹಣೆ ಕೇಂದ್ರಗಳಿಗೆ ಕರೆತರಲು ಅಗತ್ಯ ವಾಹನಗಳನ್ನು ಒದಗಿಸಲಾಗುವುದು ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ಪೌರಾಡಳಿತ ,ಪ್ರಾದೇಶಿಕ ಸಾರಿಗೆ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸಂಜೆ ನಡೆದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಕೋವಿಡ್ ತಪಾಸಣೆ ಹೆಚ್ಚಿಸಲು ಸೂಚನೆ :

ಜಿಲ್ಲೆಯ ಎಲ್ಲಾ ತಹಸೀಲ್ದಾರ ಕಚೇರಿಗಳು,ಮಹಾನಗರಪಾಲಿಕೆ, ಇತರ ನಗರ ಸ್ಥಳೀಯ ಸಂಸ್ಥೆಗಳು, ಮಾರುಕಟ್ಟೆ, ರೈಲು, ಬಸ್ ನಿಲ್ದಾಣಗಳಿಗೆ ಆಗಮಿಸುವ ಸಾರ್ವಜನಿಕರು, ಆಟೋ ರಿಕ್ಷಾ ಚಾಲಕರು,ಅಪಾರ್ಟ್‌ಮೆಂಟ್ ಅಸೋಸಿಯೇಷನ್ನುಗಳು ಸದಸ್ಯರನ್ನು ಹಾಗೂ ಆಸ್ಪತ್ರೆಗಳಿಗೆ ಬರುವ ರೋಗಿಗಳು ಹಾಗೂ ಅವರ ಜೊತೆಗೆ ಬರುವ ಅಟೆಂಡರುಗಳನ್ನು ಕೂಡ ಕೋವಿಡ್ ತಪಾಸಣೆಗೆ ಒಳಪಡಿಸಬೇಕು. ತ್ವರಿತ ಮತ್ತು ಅಧಿಕ ತಪಾಸಣೆಯಿಂದ ಕೊರೊನಾ ನಿಯಂತ್ರಣ ಸಾಧ್ಯವಿದೆ .ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ದಂಡ ಹಾಕುವ ಸಂದರ್ಭದಲ್ಲಿಯೇ ಅವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

Edited By :
Kshetra Samachara

Kshetra Samachara

26/09/2020 10:45 pm

Cinque Terre

55.34 K

Cinque Terre

1

ಸಂಬಂಧಿತ ಸುದ್ದಿ