ಹುಬ್ಬಳ್ಳಿ: ಶಾಲೆಯಲ್ಲಿ ಇಬ್ಬರು ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶಾಲೆಯೊಂದನ್ನು ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದೆ.
ಹೌದು.. ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಈಗಾಗಲೇ 80% ವಿದ್ಯಾರ್ಥಿಗಳ ಕೋವಿಡ್ ಟೆಸ್ಟ್ ಕೂಡ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಸ್ಯಾನಿಟೈಸರ್ ಮಾಡಲಾಗುತ್ತಿದೆ.
ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಶಾಲೆ ಕಾಲೇಜುಗಳು ಬಂದ ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತದ ಮುಂದಿನ ಆದೇಶದವರೆಗೂ ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯನ್ನು ಬಂದ್ ಮಾಡಲಾಗಿದೆ.
Kshetra Samachara
08/01/2022 12:54 pm