ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಧಾರವಾಡ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ: ಕೊರೊನಾ ಹಾಗೂ ಓಮಿಕ್ರಾನ್ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಕ್ಷೇತ್ರ, ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಸೇರಿದಂತೆ 1 ರಿಂದ 8ನೇ ತರಗತಿವರೆಗೆ ರಜೆ ಘೋಷಣೆ ಮಾಡಿದ್ದಾರೆ.

ನಾಳೆಯಿಂದಲೇ ಈ ಆದೇಶ ಅನ್ವಯವಾಗಲಿದ್ದು, ಮುಂದಿನ ಆದೇಶದವರೆಗೂ ಶಾಲೆಗಳನ್ನು ಪುನರಾರಂಭಿಸದಂತೆ ಸೂಚನೆ ನೀಡಲಾಗಿದೆ.

ಈ ತಾಲೂಕಿನಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿದ್ದು, ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಆನ್‌ಲೈನ್ ಮೂಲಕ ತರಗತಿ ನಡೆಸಬಹುದು ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Edited By :
Kshetra Samachara

Kshetra Samachara

12/01/2022 02:45 pm

Cinque Terre

89.41 K

Cinque Terre

82

ಸಂಬಂಧಿತ ಸುದ್ದಿ