ಧಾರವಾಡ: ಸದ್ಯ ವಾತಾವರಣದಲ್ಲಾಗಿರುವ ಬದಲಾವಣೆಯಿಂದಾಗಿ ಎಲ್ಲರೂ ನೆಗಡಿ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದಾರೆ. ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೂ ನೆಗಡಿ, ಜ್ವರದಿಂದ ಬಳಲುತ್ತಿದ್ದು, ಅವರಿಗೆ ಕೋವಿಡ್ ಭೀತಿ ಎದುರಾಗಿದೆ.
ಕರ್ನಾಟಕ ವಿಶ್ವವಿದ್ಯಾನಿಲಯದ ಸರಸ್ವತಿ ವಿದ್ಯಾರ್ಥಿ ನಿಲಯದಲ್ಲಿನ ವಿದ್ಯಾರ್ಥಿಗಳನ್ನು ಸೋಮವಾರ ಕೋವಿಡ್ ತಪಾಸಣೆಗೊಳಪಡಿಸಲಾಗಿದೆ.
ಧಾರವಾಡದಲ್ಲಿ ದಿನೇ ದಿನೇ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ತಪಾಸಣೆಯನ್ನು ಕೂಡ ಜೋರಾಗಿಯೇ ನಡೆಸಲಾಗುತ್ತಿದೆ. ಈ ಹಿಂದೆ ಎಸ್‌ಡಿಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ಇದೀಗ ಶೀತ, ಜ್ವರದಿಂದ ಬಳಲುತ್ತಿದ್ದು, ಸೋಮವಾರ ಸರಸ್ವತಿ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳನ್ನು ಮಾತ್ರ ತಪಾಸಣೆಗೊಳಪಡಿಸಲಾಗಿದೆ.
Kshetra Samachara
17/01/2022 07:15 pm