ನವಲಗುಂದ : ತಾಲ್ಲೂಕಿನ ಹೆಬ್ಬಾಳ ಗ್ರಾಮದ ವಿವೇಕಾನಂದ ಪ್ರೌಢ ಶಾಲೆಯಲ್ಲಿ ಗುರುವಾರ ಹತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.
ತಾಲೂಕಿನಾದ್ಯಂತ ದಿನೇ ದಿನೇ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಒಂದೇ ವಾರದಲ್ಲಿ ಗುಡಿಸಾಗರ, ಚಿಲಕವಾಡ ಸೇರಿದಂತೆ ಇಂದು ಹೆಬ್ಬಾಳ ಗ್ರಾಮದ ವಿವೇಕಾನಂದ ಪ್ರೌಢ ಶಾಲೆಯಲ್ಲಿ ಸೋಂಕು ದೃಢ ಪಟ್ಟಿದ್ದು, ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.
Kshetra Samachara
21/01/2022 08:15 am