ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಶ್ರೀ ಅಮೃತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜ್ ಸೀಲ್‌ಡೌನ್

ಅಣ್ಣಿಗೇರಿ: ಇತ್ತೀಚಿಗಷ್ಟೇ ಆರೋಗ್ಯ ಇಲಾಖೆಯವರು ಪಟ್ಟಣದ ಶ್ರೀ ಅಮೃತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ನಿಜಲಿಂಗಪ್ಪ ಶಿವಪ್ಪ ಹುಬ್ಬಳ್ಳಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರು. ಅದರಲ್ಲಿ 3 ಜನ ಶಿಕ್ಷಕರಿಗೆ ಹಾಗೂ 17 ವಿದ್ಯಾರ್ಥಿಗಳಿಗೆ, 9 ವಿದ್ಯಾರ್ಥಿನಿಯರು ಸೇರಿ ಒಟ್ಟು 29 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ತಾಲೂಕಿನ ದಂಡಾಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದೇಶದ ಪ್ರಕಾರ ದಿನಾಂಕ ಜ.24 (ಸೋಮವಾರ)ದಿಂದ ಜ.30ರವರಿಗೆ ರಜೆ ಘೋಷಿಸಲಾಗಿದೆ ಹಾಗೂ ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ.

Edited By : Manjunath H D
Kshetra Samachara

Kshetra Samachara

24/01/2022 01:37 pm

Cinque Terre

17.24 K

Cinque Terre

0

ಸಂಬಂಧಿತ ಸುದ್ದಿ