ನವಲಗುಂದ: ಪಟ್ಟಣದ ಶ್ರೀ ಶಂಕರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಪದವಿ ಕಾಲೇಜಿನ ಒಬ್ಬ ಸಿಬ್ಬಂದಿಗೆ ಮಹಾಮಾರಿ ಒಕ್ಕರಿಸಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಕಾಲೇಜನ್ನು ಸೀಲ್‌ಡೌನ್ ಮಾಡಲಾಗಿದೆ.
ನವಲಗುಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ದೃಢಪಡುತ್ತಿದೆ. ಇನ್ನು ಜನವರಿ 26ರಂದು ಕೂಡ ಶಂಕರ ಕಾಲೇಜು ಮೂರು ದಿನಗಳ ಸೀಲ್‌ಡೌನ್ ಇರಲಿರುವ ಹಿನ್ನೆಲೆಯಲ್ಲಿ ಕೇವಲ ಸಿಬ್ಬಂದಿ ಮಾತ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.
Kshetra Samachara
24/01/2022 02:27 pm