ಹುಬ್ಬಳ್ಳಿ: ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಪುನರಾರಂಭಗೊಂಡಿವೆ. ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ಗ್ರಾಮೀಣ ತಾಲ್ಲೂಕಿನಲ್ಲಿ ಶಾಲೆಗಳನ್ನು ಒಂದೊಂದು ಯೂನಿಟ್ ಮಾಡಿ ತರಗತಿಗಳ ಪುನರಾರಂಭಕ್ಕೆ ಜಿಲ್ಲಾಡಳಿತ ಆದೇಶ ನೀಡಿದೆ.
1 ರಿಂದ 8 ನೇ ತರಗತಿವರೆಗೆ ತರಗತಿಗಳ ಪುನರಾರಂಭವಾಗಿವೆ. ಆದರೆ ಕೋವಿಡ್ ಗೆ ಹೆದರಿ ಶಾಲೆಗಳತ್ತ ಮಕ್ಕಳು ಮುಖ ಮಾಡಿಲ್ಲ. ಅದರಲ್ಲೂ ಹುಬ್ಬಳ್ಳಿ ನಗರದಲ್ಲಿ ಮಕ್ಕಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಶೇಕಡಾ 50 ರಷ್ಟು ಮಕ್ಕಳು ಮಾತ್ರ ತರಗತಿಗಳಿಗೆ ಹಾಜರಾಗಿದ್ದಾರೆ. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಆದರೆ ತರಗತಿಗೆ ಹಾಜರಾದವರು ಸುಮಾರು 100 ವಿದ್ಯಾರ್ಥಿಗಳು ಮಾತ್ರ. 2 ವಾರಗಳ ಹಿಂದೆ ಈ ಶಾಲೆಯಲ್ಲಿ ಮೂವರು ಶಿಕ್ಷಕರು ಮತ್ತು ಮೂವತ್ತುಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಪೋಷಕರಲ್ಲಿ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ. ನಾಳೆಯಿಂದ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಕೆಲ ವಿದ್ಯಾರ್ಥಿಗಳು ಮಾಹಿತಿ ಕೊರತೆಯಿಂದ ಬಂದಿಲ್ಲ.
Kshetra Samachara
24/01/2022 04:09 pm