ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಮಕ್ಕಳ ಲಸಿಕಾ ಅಭಿಯಾನಕ್ಕೆ ಉತ್ತಮ ಸ್ಪಂದನೆ: ಡಿಸಿ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಆರಂಭವಾಗಿರುವ 15 ರಿಂದ 18 ವರ್ಷದೊಳಗಿನ ಮಕ್ಕಳ ಲಸಿಕಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರಕಿದ್ದು, ಮಕ್ಕಳು ಆತ್ಮವಿಶ್ವಾಸದಿಂದ ಮುಂದೆ ಬಂದು ಲಸಿಕೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಇಂದು ಜರುಗಿದ ಮಕ್ಕಳ ಲಸಿಕಾಕರಣಕ್ಕೆ ಶಾಲಾ ಕಾಲೇಜು ಆಡಳಿತ ಮಂಡಳಿ, ಎಸ್‌ಡಿಎಂಸಿ ಸಮಿತಿ ಸದಸ್ಯರು, ಶಿಕ್ಷಕರು ಉತ್ತಮ ಸಹಕಾರ ನೀಡಿದ್ದಾರೆ.

ಇಂದು ಶಾಲಾ ಅವಧಿ ಮುಗಿಯುವವರೆಗೆ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರ ವಿವರವನ್ನು ಪೋರ್ಟಲ್‌ನಲ್ಲಿ ಸಂಜೆ 4:30 ರವರೆಗೆ ದಾಖಲಿಸಲಾಗಿದ್ದು, 11,815 ವಿದ್ಯಾರ್ಥಿಗಳ ವಿವರ ದಾಖಲಾಗಿದೆ. ಒಟ್ಟಾರೆ ಇಂದು ಲಸಿಕೆ ಪಡೆದಿರುವ ವಿದ್ಯಾರ್ಥಿಗಳ ವಿವರಗಳನ್ನು ಪೋರ್ಟಲ್‌ನಲ್ಲಿ ದಾಖಲಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ನಾಳೆಯೂ ಸೇರಿದಂತೆ ಜಿಲ್ಲೆಯಲ್ಲಿ ಮಕ್ಕಳ ಲಸಿಕಾಕರಣ ಗುರಿ ಸಾಧಿಸುವವರೆಗೆ ಪ್ರತಿದಿನ ವಿವಿಧ ಶಾಲಾ, ಕಾಲೇಜುಗಳಲ್ಲಿ ಲಸಿಕಾಕರಣ ಮುಂದುವರಿಯುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

03/01/2022 07:02 pm

Cinque Terre

20.34 K

Cinque Terre

0

ಸಂಬಂಧಿತ ಸುದ್ದಿ