ಧಾರವಾಡ: ದಿನೇ ದಿನೇ ಕೊರೊನಾ ಸೋಂಕು ಮತ್ತೆ ಉಲ್ಬಣಿಸುತ್ತಿದೆ. ಶಾಲಾ ಮಕ್ಕಳಲ್ಲಿ ಕೊರೊನಾ ಹೆಚ್ಚಾಗಿ ಕಾಣಿಸುತ್ತಿದೆ. ನಿನ್ನೆಯಷ್ಟೇ ಧಾರವಾಡದ ಅಲ್ಪಸಂಖ್ಯಾತರ ಬಾಲಕಿಯರ ವಸತಿ ನಿಲಯದಲ್ಲಿನ 13 ಜನ ವಿದ್ಯಾರ್ಥಿನಿಯರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಇದೀಗ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಸರ್ಕಾರಿ ಅನುದಾನಿತ ಶಾಲೆಯ 11 ಜನ ಮಕ್ಕಳಲ್ಲಿ ಕೊರೊನಾ ಕಾಣಿಸಿಕೊಂಡಿದೆ.
ಈ ಶಾಲೆಯ 13 ರಿಂದ 15 ವರ್ಷ ವಯೋಮಾನದ ವಿದ್ಯಾರ್ಥಿಗಳಲ್ಲಿ ಇದೀಗ ಕೊರೊನಾ ಕಾಣಿಸಿಕೊಂಡಿದೆ. ಸದ್ಯ ಕೊರೊನಾ ತಗುಲಿರುವ ಮಕ್ಕಳನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿದ್ದು, ಐದು ದಿನಗಳವರೆಗೆ ಶಾಲೆಯನ್ನು ಬಂದ್ ಮಾಡಲಾಗಿದೆ.
Kshetra Samachara
11/01/2022 09:16 pm