ನವಲಗುಂದ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ 235 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದ ಹಿನ್ನೆಲೆ 31 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಇಂದು ಪುರಸಭೆ ಮುಖ್ಯಾಧಿಕಾರಿಗಳಾದ ವೀರಪ್ಪ ಹಸಬಿ ಅವರ ನೇತೃತ್ವದಲ್ಲಿ ಕಾಲೇಜನ್ನು ಸೀಲ್ ಡೌನ್ ಮಾಡಲಾಯಿತು.
ಹೌದು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ವಿದ್ಯಾರ್ಥಿಗಳಿಗೆ ಕಾಡುತ್ತಿರುವ ಕೊರೋನಾ ಸೋಂಕಿನಿಂದ ಇಂದು ನಗರದ ಕನ್ನಡ ಶಾಲೆ ನಂ-4 ರಲ್ಲಿ ಮತ್ತು ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಸೇರಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮಹಾಮಾರಿ ಒಕ್ಕರಿಸಿದ್ದು, ಕಾಲೇಜನ್ನು ಜನವರಿ 29ಕ್ಕೆ ಸ್ಯಾನಿಟೈಸಿಂಗ್ ಮಾಡಿ, 30 ರ ವರೆಗೆ ಸೀಲ್ ಡೌನ್ ಮಾಡಲಾಗಿದೆ.
Kshetra Samachara
27/01/2022 05:33 pm