ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಇಂದು ಕ್ಲಾಸಿಕ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ; ಸಾಮಾಜಿಕ ಕಾರ್ಯಕ್ಕೆ ಮುಂದಾದ ಕ್ಲಾಸಿಕ್

ಧಾರವಾಡ: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಕ್ಲಾಸಿಕ್ ಕೆಎಎಸ್/ಐಎಎಸ್ ಸ್ಟಡಿ ಸರ್ಕಲ್, ಧಾರವಾಡ ಹಾಗೂ ರೋಟರಿ ರಕ್ತ ಭಂಡಾರ, ಧಾರವಾಡ ಇವರ ಸಹಯೋಗದಲ್ಲಿಂದು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಹೌದು. ಸಪ್ತಾಪೂರ ಬಾವಿ ಸರ್ಕಲ್ ಹತ್ತಿರದ ಕ್ಲಾಸಿಕ್ ಸ್ಟಡಿ ಸರ್ಕಲ್‌ನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಸಂಜೆ 5 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ. ನೂರಾರು ಸಂಖ್ಯೆಯಲ್ಲಿ ರಕ್ತದಾನ ಮಾಡಲು ವಿದ್ಯಾರ್ಥಿಗಳು ಹಾಗೂ ಶಿಬಿರಾರ್ಥಿಗಳು ಮುಂದಾಗಿದ್ದು, ಆಸಕ್ತರು 9980552080/81 ದೂರವಾಣಿ ಸಂಪರ್ಕಿಸುವ ಮೂಲಕ ರಕ್ತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಕ್ಲಾಸಿಕ್ ಸಮೂಹ ಸಂಸ್ಥೆಗಳು ಅಧ್ಯಕ್ಷ ಲಕ್ಷ್ಮಣ ಎಸ್. ಉಪ್ಪಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

18/08/2022 12:59 pm

Cinque Terre

9.16 K

Cinque Terre

0

ಸಂಬಂಧಿತ ಸುದ್ದಿ