ನವಲಗುಂದ : ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ನವಲಗುಂದ ತಾಲ್ಲೂಕುಗಳ 51 ಗ್ರಾಮಗಳಲ್ಲಿ 298 ಜಾನುವಾರುಗಳಲ್ಲಿ ಚರ್ಮ ಗಂಟು ( Lumpy Skin Disease ) ರೋಗವು ಕಂಡು ಬಂದ ಹಿನ್ನೆಲೆ ನವಲಗುಂದ ಪಶು ಆಸ್ಪತ್ರೆಯಿಂದ ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ.
ನವಲಗುಂದ ತಾಲ್ಲೂಕಿನ ಹೆಬ್ಬಾಳ, ಅಳಗವಾಡಿ ಹಾಗೂ ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ, ಶಿಶುವಿನಹಳ್ಳಿ ಗ್ರಾಮಗಳಲ್ಲಿ ಪಶುವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿಗಳು ಜಾನುವಾರುಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದು, ರೋಗವು ಜಾನುವಾರುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗ ಹರಡುವಿಕೆಯನ್ನು ತಡೆಗಟ್ಟಲು ಈಗಾಗಲೇ ಜಿಲ್ಲೆಗೆ 50,000 ಡೋಸ್ ಲಸಿಕೆಯನ್ನು ಪಡೆದುಕೊಂಡು, ಜಿಲ್ಲೆಯ ಪಶು ವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿಗಳ ತಂಡದೊಂದಿಗೆ ರೋಗ ಉಲ್ಬಣಗೊಂಡ ಗ್ರಾಮಗಳ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿಯ ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯವು ಪ್ರಗತಿಯಲ್ಲಿದೆ.
ರೋಗ ಹರಡುವುದನ್ನು ನಿಯಂತ್ರಿಸಲು ಜಿಲ್ಲಾಯಾದ್ಯಂತ ಸೆಪ್ಟೆಂಬರ್ 27 ರಿಂದ ಅಕ್ಟೊಬರ್ 26 ರ ವರೆಗೆ ಜಾನುವಾರುಗಳ ಸಂತೆ, ಜಾನುವಾರುಗಳ ಜಾತ್ರೆ ಮತ್ತು ಜಾನುವಾರುಗಳ ಸಾಗಾಣಿಕೆಯನ್ನು ನಿಷೇಧಿಸಿ, ಉಪನಿರ್ದೇಶಕರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಧಾರವಾಡ ಆದೇಶಿಸಿದೆ.
Kshetra Samachara
30/09/2022 03:51 pm