ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳ ವಿರುದ್ದ ಮತ್ತೆ ಅಸಮಾಧಾನ ಹೊರಹಾಕಿದ ಶೆಟ್ಟರ್

ಹುಬ್ಬಳ್ಳಿ: ಕೋವಿಡ್ ಸೊಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿಲ್ಲ.ಕೋವಿಡ್ ಹೆಸರಲ್ಲಿ ಖಾಸಗಿ ಆಸ್ಪತ್ರೆ ಗಳಿಂದ ಬೇಕಾಬಿಟ್ಟಿ ಹಣ ವಸೂಲಿ ನಡೆದಿದೆ ಎಂದು ಖಾಸಗಿ ಆಸ್ಪತ್ರೆಗಳ ವಿರುದ್ದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ.‌

ನಿನ್ನೆ ಕಿಮ್ಸ್ ನಲ್ಲಿ ನಡೆದ ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಅರೋಗ್ಯ ಸಚಿವ ಸುಧಾಕರ ಸಮ್ಮುಖದಲ್ಲೆ ಖಾಸಗಿ ಆಸ್ಪತ್ರೆಗಳ ವಸೂಲಿ ದಂದೆ ಬಗ್ಗೆ ಶೆಟ್ಟರ್ ಕಿಡಿಕಾರಿದರು.

ಈ ಹಿಂದೆಯು ಖಾಸಗಿ ಆಸ್ಪತ್ರೆಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದ ಅವರು, ಈಗ ಮತ್ತೊಮ್ಮೆ ಸಾರ್ವಜನಿಕ ಸಮಾರಂಭದಲ್ಲಿ ವೈದ್ಯರು, ವೈದಕೀಯ ಸಿಬ್ಬಂದಿಗಳು ಹಾಗೂ ಆರೋಗ್ಯ ಸಚಿವರ ಸಮ್ಮುಖದಲ್ಲೆ ಅಸಮಾಧಾನ‌ ವ್ಯಕ್ತಪಡಿಸಿದ್ದಾರೆ. ಕೋವಿಡ್ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ವಸೂಲಿ‌ ದಂದೆಗೆ ಬ್ರೇಕ್ ಹಾಕೋರು ಯಾರು..? ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಮಣಿದಿದೆನಾ..? ಮಾಜಿ ಸಿಎಂ ಹಾಗೂ ಹಿರಿಯ ಸಚಿವರು ಖಾಸಗಿ ಆಸ್ಪತ್ರೆಗಳ ವಿರುದ್ದ ಪದೇ ಪದೇ ಅಸಮಾಧಾನ ವ್ಯಕ್ತಪಡಿಸಿದ್ರು, ಕ್ರಮ ಕೈಗೊಳ್ಳಲಾಗದ ಸ್ಥಿತಿಗೆ ಸರಕಾರ ಬಂದಿದ್ಯಾ..? ಎಂಬ ಅನುಮಾನ ಹುಟ್ಟು ಹಾಕಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ.ಕೊರೊನಾ ಸೊಂಕಿತರನ್ನ ಖಾಸಗಿ ಆಸ್ಪತ್ರೆಯವರು ಸಹ ಕಿಮ್ಸ್ ಗೆ ದಾಖಲು ಮಾಡುವಂತೆ ಸೂಚಿಸುತ್ತಾರೆ. ಕೋವಿಡ್ ಸೊಂಕಿತರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ರೆ 10 ಲಕ್ಷದವರೆಗೆ ಹಣ ವಸೂಲಿ ಮಾಡಲಾಗುತ್ತದೆ, ಖಾಸಗಿ ಅಸ್ಪತ್ರೆಗಳು ಮಾನವೀಯತೆ ಮರೆತಿದ್ದು ಸಾಕಷ್ಟು ಬೇಸರ ಮೂಡಿಸಿದೆ, ಮಾನವೀಯತೆ ಮರೆತರೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖಾಸಗಿ ಆಸ್ಪತ್ರೆ ಹಾಗೂ ವೈದ್ಯರಿಗೆ ಶೆಟ್ಟರ್ ಖಡಕ್ ಎಚ್ಚರಿಕೆ ನೀಡಿದರು.

Edited By : Manjunath H D
Kshetra Samachara

Kshetra Samachara

22/11/2020 03:42 pm

Cinque Terre

102.8 K

Cinque Terre

24

ಸಂಬಂಧಿತ ಸುದ್ದಿ