ಧಾರವಾಡ: ಧಾರವಾಡ ಜಿಲ್ಲಾಡಳಿತ, ಗೃಹರಕ್ಷಕ ದಳ, ಪೌರ ರಕ್ಷಣಾ ದಳ, ಅಂಜುಮನ್ ಎ ಇಸ್ಲಾಂ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸೇರಿದಂತೆ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ಇಂದು ಹಮ್ಮಿಕೊಂಡಿದ್ದ ಕೋವಿಡ್ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚಾಲನೆ ನೀಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿತು.ಈ ಸಂದರ್ಭದಲ್ಲಿ ರಕ್ತದಾನ, ಕೊರೊನಾ ವೈರಾಣು ವೇಷಧಾರಿಯು ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕರೆತರುವುದು, ಏಂಜೆಲ್ ವೇಷಧಾರಿಗಳು ಅವರಿಗೆ ಸ್ಯಾನಿಟೈಸರ್ ಹಾಕಿ, ಮಾಸ್ಕ್ ವಿತರಿಸುವ ಕಾರ್ಯಗಳನ್ನು ಕೈಗೊಂಡಿದ್ದು ಗಮನ ಸೆಳೆಯಿತು.
ಡಿಸಿಪಿ ಆರ್.ಬಿ.ಬಸರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ್, ಪೌರ ರಕ್ಷಣಾ ದಳದ ಡಾ.ಸತೀಶ ಇರಕಲ್, ಗೃಹರಕ್ಷಕ ದಳದ ಸತೀಶ ಪಾಟೀಲ , ಡಾ.ಉಮೇಶ ಹಳ್ಳಿಕೇರಿ ಮತ್ತಿತರರು ಇದ್ದರು.
ಇದೇ ಸಂದರ್ಭದಲ್ಲಿ ಉಪನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಪ್ರಮೋದ ಯಲಿಗಾರ ಸೇರಿದಂತೆ ಹಲವು ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.
Kshetra Samachara
16/12/2020 01:36 pm