ಧಾರವಾಡ: ಕೋವಿಡ್-19 ರೋಗದ ನಿಯಂತ್ರಣ ಉದ್ದೇಶದಿಂದ ಸರ್ಕಾರದ ಆದೇಶಗಳನ್ನು ಪಾಲನೆ ಹಿನ್ನೆಲೆಯಲ್ಲಿ ಧಾರವಾಡದ ಶ್ರೀ ಉಳವಿ ಚನ್ನಬಸವೇಶ್ವರ ರಥೋತ್ಸವ ರದ್ದು ಮಾಡಲಾಗಿದೆ.
ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಧಾರ್ಮಿಕ ಕಾರ್ಯಕ್ರಮ ಮತ್ತು ಸೆಪ್ಟೆಂಬರ್ 9ರಂದು ನಡೆಯಬೇಕಿದ್ದ ರಥೋತ್ಸವವನ್ನು ರದ್ದುಗೊಳಿಸಲಾಗಿದೆ. ಆಗಸ್ಟ್ 9ರಿಂದ ಶ್ರಾವಣ ಮಾಸದ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ದರ್ಶನ ಪಡೆಯಬೇಕು. ದೇವಸ್ಥಾನದ ಸುತ್ತಮುತ್ತ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.
Kshetra Samachara
09/08/2021 09:05 pm