ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ತುರ್ತು ಸಭೆ ನಡೆಸಿದ್ದಾರೆ.
ಹುಬ್ಬಳ್ಳಿ ಪಾಲಿಕೆ ಕಚೇರಿಯಲ್ಲಿ ತುರ್ತು ಸಭೆ ಕರೆದ ಜಿಲ್ಲಾಧಿಕಾರಿಗಳು, ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರ ಸಭೆ ನಡೆಸಿದ್ದಾರೆ. ಅಲ್ಲದೇ ಧಾರ್ಮಿಕ ಮುಖಂಡರ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ ಅವರು, ಕೊವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆ ಕುರಿತು ಸೂಚನೆ ನೀಡಿದರು.
ಸಭೆ ಬಳಿಕ ಮನೆ-ಮನೆಗೆ ತೆರಳಿ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದರು. ಇದೇ ವೇಳೆ ಕೊರೋನಾ ನಿಯಮ ಉಲ್ಲಂಘಿಸಿದರೇ ಕಠಿಣ ಕ್ರಮದ ಎಚ್ಚರಿಕೆ ನೀಡಿದರು.
Kshetra Samachara
28/11/2021 04:43 pm