ಹುಬ್ಬಳ್ಳಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂಜಾಗ್ರತೆವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂಬಂಧ ಹುಬ್ಬಳ್ಳಿಯಲ್ಲಿ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, "ಕೊರೋನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಏಪ್ರಿಲ್ 27ರಂದು ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಸೂಚನೆ ಕೂಡ ನೀಡಲಿದ್ದಾರೆ. ಈ ಬಳಿಕ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ" ಎಂದು ತಿಳಿಸಿದ್ದಾರೆ..
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
25/04/2022 11:04 am