ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: 11 ದಿನಗಳವರೆಗೆ ಗಣೇಶೋತ್ಸವ ಆಚರಣೆಗೆ ಅವಕಾಶ

ಧಾರವಾಡ: ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವವನ್ನು ಗರಿಷ್ಠ 11 ದಿನಗಳವರೆಗೆ ಕೋವಿಡ್ ಮಾರ್ಗಸೂಚಿಗಳೊಂದಿಗೆ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾದಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಸೆ.5 ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಗರಿಷ್ಠ 5 ದಿನ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿತ್ತು. ಪರಿಷ್ಕೃತ ಆದೇಶದಲ್ಲಿ ಈ ನಿಯಮ‌ ಸಡಿಲಿಸಿ ಜಿಲ್ಲೆಯಲ್ಲಿ ಈ ಹಿಂದೆ ಸಾಂಪ್ರದಾಯಿಕವಾಗಿ 11 ದಿನಗಳವರೆಗೆ ಗಣೇಶೋತ್ಸವ ಆಚರಿಸುತ್ತಿದ್ದವರಿಗೆ ಈ ಬಾರಿಯೂ ಗರಿಷ್ಠ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿದೆ.

ಆಚರಣೆ ವೇಳೆ ಕೋವಿಡ್-19 ರ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

13/09/2021 10:14 pm

Cinque Terre

51.54 K

Cinque Terre

19

ಸಂಬಂಧಿತ ಸುದ್ದಿ